ಮಾಜಿ ಸಿಎಂ ಸಿದ್ದರಾಮಯ್ಯ ನವರಿಗೂ ಒಕ್ಕರಿಸಿತಾ ಕೊರೊನಾ….

ಬೆಂಗಳೂರಿನಲ್ಲಿ ಕೊರೊನಾ ರುದ್ರತಾಂಡವ ಆಡುತ್ತಿದೆ. ದಿನದಿಂದ ದಿನಕ್ಕೆ ಬೆಂಗಳೂರಿನಲ್ಲಿ ಕೊರೊನಾ ಪೊಸಿಟಿವ್ ಕೇಸ್ ಗಳು ಹೆಚ್ಚಾಗುತ್ತಲೇ ಇದೆ. ಮೊನ್ನೆ ತಾನೆ ಕರ್ನಾಟಕ ರಾಜ್ಯದ ಸಿಎಂ ಯಡಿಯೂರಪ್ಪನವರಿಗೆ ಕೊರೊನಾ ದೃಡಪಟ್ಟಿದ್ದು, ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದಾರೆಆರಂಭದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯನವರು ಯಡಿಯೂರಪ್ಪನವರ ಆರೋಗ್ಯ ವಿಚಾರಿಸಲು ಮಣಿಪಾಲ ಆಸ್ಪತ್ರೆಗೆ ಬೇಟಿ ನೀಡಿದ್ದರು ಎಂದು ಹೇಳಲಾಗುತ್ತಿದೆ.

 

 ನಿನ್ನೆ ಬೆಳಿಗ್ಗೆಯಿಂದ ಸಿದ್ದರಾಮಯ್ಯನವರಿಗೆ ಸ್ವಲ್ಪ ಜ್ವರ ಕಾಣಿಸಿಕೊಂಡಿದ್ದು, ಅವರನ್ನು ನಿನ್ನೆ ರಾತ್ರಿ 11:30ಕ್ಕೆ ಮಣಿಪಾಲ ಆಸ್ಪತ್ರೆಗೆ ದಾಖಲಿಸಿದ್ದಾರೆ. ವೇಳೆ ಸಿದ್ದರಾಮಯ್ಯನವರನ್ನು ಕೊರೊನಾ ಪರಿಕ್ಷೇಗೆ ಒಳಪಡಿಸಿದಾಗ ಕೊರೊನಾ ಆಗಿರುವುದು ದೃಡಪಟ್ಟಿದೆ. ಈಗ ಆಸ್ಪತ್ರೆಯಲ್ಲಿ ಮಗ ಡಾ.ಯತೀಂದ್ರ ಅವರು ಸಿದ್ದರಾಮಯ್ಯನವರನ್ನು ಆರೈಕೆ ಮಾಡುತ್ತಿದ್ದಾರೆ.

 

nodu maga website logo

ಇನ್ನೂ ಹೆಚ್ಚು ಕನ್ನಡ ನ್ಯೂಸ್ ಓದಲು ನೋಡುಮಗ.ಕಂ ಫೇಸ್ಬುಕ್ ಪೇಜ್ ಲೈಕ್ ಮಾಡಿ -->>

ಸಿದ್ದರಾಮಯ್ಯನವರ ಪುತ್ರ ಯತೀಂದ್ರ ಅವರು ಬಗ್ಗೆ ಟ್ವೀಟ ಮಾಡಿದ್ದಾರೆನಿನ್ನೆ ಬೆಳಿಗ್ಗೆಯಿಂದ ತಂದೆಯವರಿಗೆ ಜ್ವರ ಬಂದಿದ್ದು ರಾತ್ರಿ ಆಸ್ಪತ್ರೆಗೆ ದಾಖಲಾಗಿದ್ದರು. Corona Antigen test ಕೊರೊನಾ ಸೋಂಕು ಬಂದಿರುವುದು ದೃಢಪಟ್ಟಿದೆ. ಇತ್ತೀಚೆಗೆ ಅವರ ಸಂಪರ್ಕಕ್ಕೆ ಬಂದವರು quarantine ಆಗಬೇಕೆಂದು ಕೇಳಿಕೊಳ್ಳುತ್ತೇನೆಎಂದು ಯತೀಂದ್ರರವರು ಮನವಿ ಮಾಡಿಕೊಂಡಿದ್ದಾರೆ

ತಮಗೆ ಕೊರೊನಾ ದೃಡಪಟ್ಟಿರುವುದರ ಬಗ್ಗೆ ಸಿದ್ದರಾಮಯ್ಯರವರು ಕೂಡಾ ಟ್ವೀಟ ಮಾಡಿದ್ದಾರೆ, “ನಾನು ಕೊರೊನಾ ಪರೀಕ್ಷೆಯಲ್ಲಿ ಪಾಸಿಟಿವ್ ಆಗಿದೆ ಎಂದು ವರದಿ ಬಂದಿದೆ. ರೋಗ ಲಕ್ಷಣಗಳಿಲ್ಲದಿದ್ದರೂ ವೈದ್ಯರ ಸಲಹೆಯಂತೆ ನಿನ್ನೆ ರಾತ್ರಿಯೆ ಆಸ್ಪತ್ರೆಗೆ ದಾಖಲಾಗಿದ್ದೆನೆ. ಆತಂಕಕ್ಕೆ ಕಾರಣ ಇಲ್ಲ, ಕೆಲವು ದಿನಗಳಿಂದ ನನ್ನ ಜೊತೆ ಸಂಪರ್ಕದಲ್ಲಿದ್ದವರು ಕೊರೊನಾ ಪರೀಕ್ಷೆ ಮಾಡಿಸಿಕೊಳ್ಳಬೇಕೆಂದು ವಿನಂತಿಸಿಕೊಳ್ಳುತ್ತೆನೆಎಂದು ಮನವಿ ಮಾಡಿಕೊಂಡಿದ್ದಾರೆ.

ಮಾಜಿ ಸಿಎಂ ಸಿದ್ದರಾಮಯ್ಯ ಆಸ್ಪತ್ರೆಗೆ ದಾಖಲಾಗುವ ಮುನ್ನ ಸಿಎಂ ಯಡಿಯೂರಪ್ಪನವರ ಆರೋಗ್ಯ ವಿಚಾರಿಸಿದ್ದರು. ಈಗ ಇಬ್ಬರು ಸಿಎಂಗಳು ಮಣಿಪಾಲ ಆಸ್ಪತ್ರೆಯ ಸ್ಪೆಷಲ್ವಾರ್ಡ್ನಲ್ಲಿದ್ದು ಚಿಕೆತ್ಸೆ ಪಡೆದುಕೊಳ್ಳುತ್ತಿದ್ದಾರೆ. ಇವರಿಬ್ಬರ ಸಂಪರ್ಕಕ್ಕೆ ಯಾರಾದರೂ ಬಂದಿದ್ದಾರೆ ದಯವಿಟ್ಟು ಕೊರೊನಾ ಪರೀಕ್ಷೆ ಮಾಡಿಸಿಕೊಳ್ಳಿ. ಮತ್ತು ಸಿದ್ದರಾಮಯ್ಯ ಹಾಗೂ ಯಡಿಯೂರಪ್ಪನವರು ಆದಷ್ಟು ಬೇಗ ಸುಧಾರಿಸಿಕೊಳ್ಳಲಿ ಎಂದು ಎಲ್ಲರೂ ಹಾರೈಸುತ್ತಿದ್ದಾರೆ.

ನೋಡುಮಗ.ಕಂ ವಿಡಿಯೋ ನ್ಯೂಸ್ ಗಳನ್ನು ನೋಡಲು ನಮ್ಮ   YOUTUBE  ಚಾನೆಲ್  SUBSCRIBE  ಮಾಡಿ — >>

(Visited 75 times, 1 visits today)

You Might Be Interested In

LEAVE YOUR COMMENT

Your email address will not be published. Required fields are marked *