ಬಿ ಎಸ್ ಯಡಿಯೂರಪ್ಪನವರು COVID-19 ಪಾಸಿಟೀವ್ ಬಂದ ನಂತರ ಆಸ್ಪತ್ರೆಗೆ ದಾಖಲಾಗಿದ್ದಾರೆ

ಕರ್ನಾಟಕದ ಮುಖ್ಯ ಮಂತ್ರಿ ಬಿ ಎಸ್ ಯಡಿಯೂರಪ್ಪನವರು Covid -ಪರೀಕ್ಷೆಯಲ್ಲಿ ಪಾಸಿಟಿವ್ ಆಗಿರುವುದು ದೃಢಪಟ್ಟಿದೆ. ಯಡಿಯೂರಪ್ಪನವರು ಲೋಕದ ಕ್ಷೇಮವನ್ನು ಗಮನದಲ್ಲಿಟ್ಟುಕೊಂಡು ಇತ್ತೀಚೆಗೆ ತಮ್ಮೊಂದಿಗೆ ಸಂಪರ್ಕದಲ್ಲಿ ಇದ್ದವರು ಸ್ವಯಂಪ್ರೇರಿತರಾಗಿ ಕ್ವಾರಂಟೈನ್ ಆಗಬೇಕೆಂದು ವಿನಂತಿಸಿದ್ದಾರೆ.

ಶ್ರೀ ಯಡಿಯೂರಪ್ಪನವರನ್ನು ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ ತಂಡ ತಿಳಿಸಿದೆ. 77 ವರ್ಷದ ಶ್ರೀ ಯಡಿಯೂರಪ್ಪ ಅವರು ತಮ್ಮೊಂದಿಗೆ ಸಂಪರ್ಕಕ್ಕೆ ಬಂದವರಿಗೆ ಕೋವಿಡ್ ರೋಗಲಕ್ಷಣಗಳ ಬಗ್ಗೆ ಎಚ್ಚರದಿಂದಿರಿ ಮತ್ತು ಸ್ವಯಂ-ಪ್ರತ್ಯೇಕವಾಗಿರಲು ವಿನಂತಿಸಿದರು.

ಕರ್ನಾಟಕ ಮುಖ್ಯಮಂತ್ರಿ ಬಿ.ಎಸ್.ಯಡಿಯುರಪ್ಪ ಭಾನುವಾರ ಆಗಸ್ಟ್ 2 ರಂದು ಕಳೆದ 24 ಗಂಟೆಗಳಲ್ಲಿ ಕರೋನ ವೈರಸ್ ಪಾಸಿಟಿವ್ ವರದಿ ಪಡೆದ ಮತ್ತೊಬ್ಬ ಪ್ರಮುಖ ರಾಜಕೀಯ ನಾಯಕರು.

ಕೊರೋನಾ ಪರೀಕ್ಷಾ ವರದಿಯಲ್ಲಿ ಪಾಸಿಟಿವ್ ಬಂದಿದ್ದು ಯಾವುದೇ ರೋಗಲಕ್ಷಣಗಳು ಇಲ್ಲದಿದ್ದರೂ ಮುನ್ನೆಚ್ಚರಿಕೆ ದೃಷ್ಟಿಯಿಂದ ಆಸ್ಪತ್ರೆಗೆ ದಾಖಲಾಗುತ್ತಿದ್ದೇನೆಂದು ಸ್ವತಃ ತಮ್ಮ ಟ್ವಿಟ್ಟರ್ ಖಾತೆಯ ಮೂಲಕ ಜನತೆಗೆ ತಿಳಿಸಿದ್ದಾರೆ. ಇತ್ತೀಚೆಗೆ ತಮ್ಮೊಂದಿಗೆ ಹತ್ತಿರ ಸಂಪರ್ಕದಲ್ಲಿ ಇದ್ದವರು ಸ್ವಯಂಪ್ರೇರಿತರಾಗಿ ಕ್ವಾರಂಟೈನ್ ಆಗಬೇಕೆಂದು ಟ್ವಿಟ್ಟರ್ ಖಾತೆಯ ಮೂಲಕ ವಿನಂತಿಸಿದ್ದಾರೆ.

ನೋಡುಮಗ.ಕಂ ವಿಡಿಯೋ ನ್ಯೂಸ್ ಗಳನ್ನು ನೋಡಲು ನಮ್ಮ   YOUTUBE  ಚಾನೆಲ್  SUBSCRIBE  ಮಾಡಿ — >>

(Visited 174 times, 1 visits today)

You Might Be Interested In