ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ದೆಹಲಿ ಆಸ್ಪತ್ರೆಗೆ ದಾಖಲಿಸಲಾಗಿದೆ

ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿಯನ್ನು ಪರೀಕ್ಷೆಗಳಿಗಾಗಿ ಇಂದು ಸರ್ ಗಂಗಾ ರಾಮ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಆಸ್ಪತ್ರೆ ಅಧಿಕಾರಿಗಳು ತಿಳಿಸಿದ್ದಾರೆ.
“ರೂಟೀನ್ ಪರೀಕ್ಷೆಗಳು ಮತ್ತು ಇನ್ವೆಸ್ಟಿಗೇಷನ್ಸ್ ಗಾಗಿ” ಅವರನ್ನು ದೆಹಲಿಯ ಖಾಸಗಿ ಸೌಲಭ್ಯಕ್ಕೆ ಸಂಜೆ 7 ಗಂಟೆಗೆ ದಾಖಲಿಸಲಾಗಿದೆ ಎಂದು ಆಸ್ಪತ್ರೆ ಆರೋಗ್ಯ ಬುಲೆಟಿನ್ ನಲ್ಲಿ ತಿಳಿಸಿದೆ.

“ಅವರ ಸ್ಥಿತಿ ಪ್ರಸ್ತುತ ಸ್ಥಿರವಾಗಿದೆ” ಎಂದು ಬೋರ್ಡ್ ನ ಅಧ್ಯಕ್ಷ ಡಾ ಡಿ ಎಸ್ ರಾಣಾ ಹೇಳಿದ್ದಾರೆ.

ಹೊಟ್ಟೆ ನೋವಿನಿಂದ ಕಾಂಗ್ರೆಸ್ ಅಧ್ಯಕ್ಷರನ್ನು ಫೆಬ್ರವರಿಯಲ್ಲಿ ಅದೇ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ನಿನ್ನೆ ದಿನ, ಸೋನಿಯಾ ಗಾಂಧಿ ಅವರು ಪಕ್ಷದ ರಾಜ್ಯಸಭಾ ಸದಸ್ಯರೊಂದಿಗೆ ಸಭೆ ನಡೆಸಿ ಅವರೊಂದಿಗೆ ಪ್ರಸ್ತುತ ರಾಜಕೀಯ ಪರಿಸ್ಥಿತಿ ಕುರಿತು ಚರ್ಚಿಸಿದ್ದರು.

ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆಯನ್ನು ಆಯೋಜಿಸಲಾಗಿತ್ತು, ಇದರಲ್ಲಿ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಸೇರಿದಂತೆ ಅದರ ಉನ್ನತ ನಾಯಕರು ಭಾಗವಹಿಸಿದ್ದರು.

(Visited 283 times, 1 visits today)

You Might Be Interested In