ನಟ ಧ್ರುವ ಸರ್ಜಾ, ಪತ್ನಿಗೆ ಕೊರೊನಾ ಪಾಸಿಟಿವ್

ಸ್ಯಾಂಡಲ್​ವುಡ್​ನ ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅವರಿಗೂ ಕರೊನಾ ಪಾಸಿಟಿವ್​ ದೃಢಪಟ್ಟಿದೆ. ನಟ ಧ್ರುವ ಸರ್ಜಾ ಹಾಗೂ ಅವರ ಪತ್ನಿ ಪ್ರೇರಣಾಗೆ ಕೊರೊನಾ ಸೋಂಕು ಇರುವುದು ದೃಢವಾಗಿದೆ.

ಈ ಬಗ್ಗೆ ಟ್ವೀಟ್ ಮಾಡಿರುವ ಧ್ರುವ, ನನಗೆ ಹಾಗೂ ನನ್ನ ಪತ್ನಿಗೆ ಕೊರೊನಾ ಸೋಂಕು ದೃಢವಾಗಿದೆ. ಸದ್ಯ ಕೊರೊನಾ ಲಕ್ಷಣಗಳು ಸಣ್ಣ ಪ್ರಮಾಣದಲ್ಲಿ ಕಂಡು ಬಂದಿದ್ದರಿಂದ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದೇವೆ. ಶೀಘ್ರವೇ ಗುಣಮುಖರಾಗಿ ಹೊರಬರುತ್ತೇವೆ ಎಂದಿದ್ದಾರೆ.

ಅಲ್ಲದೆ ನಮ್ಮ ಜೊತೆ ಸಂಪರ್ಕದಲ್ಲಿದ್ದವರು ಈ ಕೂಡಲೇ ಕೊರೊನಾ ಟೆಸ್ಟ್ ಮಾಡಿಸಿಕೊಳ್ಳಿ ಎಂದು ಮನವಿ ಕೂಡ ಮಾಡಿಕೊಂಡಿದ್ದಾರೆ.

ಇತ್ತೀಚೆಗಷ್ಟೇ ಚಿರಂಜೀವಿ ಸರ್ಜಾ ರವರ ಅಗಲಿಕೆಯ ನೋವಿಂದ ಹೊರ ಬರುವ ಮುನ್ನವೇ ಕೊರೊನ ಮತ್ತೊಂದು ನೋವನ್ನು ಸರ್ಜಾ ಕುಟುಂಬಕ್ಕೆ ನೀಡಿದೆ. ಈ ಎಲ್ಲ ನೋವನ್ನು ಬರಿಸಿ ಮತ್ತೆ ಮೊದಲಿನಂತೆ ಸರ್ಜಾ ಕುಟುಂಬ ಆಗಲಿ ಎಂದು ಬೇಡಿಕೊಳ್ಳೋಣ.

(Visited 250 times, 1 visits today)

Share and Enjoy !

You Might Be Interested In