ಆರೋಗ್ಯ ಸಚಿವ ಶ್ರೀರಾಮುಲು ಅವರಿಗೆ ಕೊರೊನ ಸೊಂಕು ದೃಡ

ಆರೋಗ್ಯ ಸಚಿವ ಶ್ರೀರಾಮುಲು ಅವರಿಗೆ ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಇಂದು ಕೊರೊನಾ ಪರೀಕ್ಷೆ ಮಾಡಿಸಿದಾಗ ಕರೊನಾ ಪಾಸಿಟಿವ್ ಆಗಿರುವುದು ಖಚಿತವಾಗಿದೆ ಎಂದು ಟ್ವಿಟರ್ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. 

“ಇಂದು ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಪರೀಕ್ಷೆ ಮಾಡಿಸಿದಾಗ ಕೊರೊನ ಪಾಸಿಟಿವ್ ಬಂದಿದೆ. ಮಾನ್ಯ ಮುಖ್ಯಮಂತ್ರಿಗಳ ನೇತೃತ್ವದಲ್ಲಿ ನನ್ನ ಇಲಾಖೆ ಸೇರಿದಂತೆ ಸರ್ಕಾರದ ಎಲ್ಲಾ ಇಲಾಖೆಗಳೂ ಜೀವದ ಹಂಗು ತೊರೆದು ಮಹಾಮಾರಿಯ ವಿರುದ್ಧ ಹಗಲಿರುಳೂ ಶ್ರಮಿಸುತ್ತಿವೆ. ಕೊರೊನ ಕಾಣಿಸಿಕೊಂಡ ಸಮಯದಿಂದಲೂ 30 ಜಿಲ್ಲೆಗಳಲ್ಲಿ ಪ್ರವಾಸ ಮಾಡಿ ಜನರಿಗೆ ಸೂಕ್ತ ಚಿಕಿತ್ಸೆ ಸಿಗುವಂತೆ ಮಾಡುವ ಸರ್ಕಾರದ ಆಶಯಕ್ಕೆ ತಕ್ಕಂತೆ ಕೆಲಸ ಮಾಡುತ್ತಿರುವ ಈ ಸಂದರ್ಭದಲ್ಲಿ ನನಗೆ ಸತ್ವಪರೀಕ್ಷೆಯ ಸಮಯ ಎದುರಾಗಿದೆ. ಈ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯಲಿದ್ದೇನೆ.

ಆದಷ್ಟೂ ಬೇಗ ಗುಣಮುಖನಾಗಿ ಸಂಕಷ್ಟ ಸಮಯದಲ್ಲಿ ಇನ್ನಷ್ಟು ಜನಸೇವೆ ಮಾಡಲು ಶಕ್ತಿ ಕೊಡುವಂತೆ ಭಗವಂತನಲ್ಲಿ ಪ್ರಾರ್ಥಿಸುತ್ತೇನೆ. ಇತ್ತೀಚಿಗೆ ನನ್ನ ಸಂಪರ್ಕದಲ್ಲಿದ್ದ ಎಲ್ಲರೂ ಮುನ್ನೆಚ್ಚರಿಕೆ ಕ್ರಮ ವಹಿಸಲು ಕೋರುತ್ತೇನೆ.” ಎಂದು ಟ್ವಿಟರ್ನಲ್ಲಿಮನವಿ ಮಾಡಿಕೊಂಡಿದ್ದಾರೆ.

ಕೊರೊನ ಪಾಸಿಟಿವ್ ಬಂದಿರುವ ಹಿನ್ನೆಲೆಯಲ್ಲಿ, ಬೆಂಗಳೂರಿನ ಶಿವಾಜಿನಗರದಲ್ಲಿರುವ ಸರ್ಕಾರಿ ಸ್ವಾಮ್ಯದ ಬೋರಿಂಗ್  ಆಸ್ಪತ್ರೆಗೆ ಆರೋಗ್ಯ ಸಚಿವ ಶ್ರೀರಾಮುಲು ಅವರು ದಾಖಲಾಗಿದ್ದಾರೆ. 

 

ಇನ್ನೂ ಹೆಚ್ಚು ಕನ್ನಡ ನ್ಯೂಸ್ ಓದಲು ನೋಡುಮಗ.ಕಂ ಫೇಸ್ಬುಕ್ ಪೇಜ್ ಲೈಕ್ ಮಾಡಿ -->>

“ಕೊರೊನ ಚಿಕಿತ್ಸೆ ಪ್ರಾರಂಭವಾಗಿದ್ದು, ಸಾಮಾನ್ಯ ಪರೀಕ್ಷೆಗಳು ಮುಗಿದಿವೆ. ಸ್ವಲ್ಪ ಜ್ವರ ಮತ್ತು ಕೆಮ್ಮು ಇದ್ದು, ವೈದ್ಯರು ಭಯ ಪಡುವ ಅಗತ್ಯವಿಲ್ಲ ಎಂದಿದ್ದಾರೆ‌. ವೈದ್ಯರ ಸಲಹೆಯಂತೆ ಆಸ್ಪತ್ರೆಯಲ್ಲಿ ನೀಡಲಾಗುವ ಡಯಟ್ ಆಹಾರ ಸೇವಿಸಲಾಗುತ್ತಿದೆ.

ನನಗೆ ಕೊರೊನ ಪಾಸಿಟಿವ್ ಬಂದಿದೆ, ಆಸ್ಪತ್ರೆಗೆ ದಾಖಲಾಗಿದ್ದೇನೆ ಎಂಬ ಮಾಹಿತಿ ಹಂಚಿಕೊಂಡಾಗಿನಿಂದ ಹಲವು ಜನನಾಯಕರು, ಮುಖಂಡರು, ಅಭಿಮಾನಿಗಳು ಶೀಘ್ರ ಗುಣಮುಖರಾಗಿ ಎಂದು ಹಾರೈಸುತ್ತಿದ್ದಾರೆ. ನಿಮ್ಮೆಲ್ಲರ ಹಾರೈಕೆ, ಆಶೀರ್ವಾದಗಳೇ ಶ್ರೀರಕ್ಷೆ. ಈ ಪ್ರೀತಿಗೆ ನಾನು ಯಾವತ್ತಿಗೂ ಋಣಿ.

ಶೀಘ್ರ ಗುಣಮುಖನಾಗಿ ಬರುವ ವಿಶ್ವಾಸವಿದ್ದು, ಯಾರೂ ಆತಂಕಪಡುವ ಅಗತ್ಯವಿಲ್ಲ” ಎಂದು ಟ್ವೀಟ್ ಮಾಡುವುದರ ಮೂಲಕ ಹಂಚಿಕೊಂಡಿದ್ದಾರೆ.

(Visited 32 times, 1 visits today)

You Might Be Interested In