ಇನ್ಫೋಸಿಸ್ ಫೌಂಡೇಶನ್ ಸುಧಾಮೂರ್ತಿ ರವರ ₹30 ಕೋಟಿ ಅನುದಾನದ ಕೊವಿಡ್ ಆಸ್ಪತ್ರೆ ಸಿದ್ದ!

ನ್ಯೂರೋ ಸರ್ಜರಿ ಓಟಿ, ಕಾರ್ಡಿಯೋ ಓಟಿ, ಸಿಟಿ ಸ್ಕ್ಯಾನ್ ಸೌಲಭ್ಯಗಳನ್ನು ಒಳಗೊಂಡಿರುವ ಕೊರೊನಾ ಆಸ್ಪತ್ರೆ ಬ್ರಾಡ್ ವೇ ರಸ್ತೆಯಲ್ಲಿರುವ ಬಿ ಬಿ ಎಂ ಪಿ ಹೊಸ ಕಟ್ಟಡದಲ್ಲಿ ನಿರ್ಮಾಣ ವಾಗಿದೆ.

ಶಿವಾಜಿನಗರದ ಬ್ರಾಡ್ ವೇ ರಸ್ತೆಯಲ್ಲಿರುವ ಬಿಬಿಎಂಪಿಗೆ ಸೇರಿದ ಕಟ್ಟಡವನ್ನು ಸುಸಜ್ಜಿತ ಕೋವಿಡ್ ಆಸ್ಪತ್ರೆಯಾಗಿ ಸಜ್ಜುಗೊಳಿಸಲಾಗುತ್ತಿದೆ.

 

ಇಲ್ಲಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಸಚಿವ ಸುಧಾಕರ್ ಅವರು, ಆಸ್ಪತ್ರೆಗೆ ಅಗತ್ಯವಿರುವ 30 ಕೋಟಿ ವೆಚ್ಚದ ಮೂಲಸೌಕರ್ಯವನ್ನು ಪ್ರತಿಷ್ಠಿತ ಇನ್ಫೋಸಿಸ್ ಫೌಂಡೇಷನ್ನಿನಿಂದ ಒದಗಿಸಲಾಗುತ್ತಿದ್ದು ಶೀಘ್ರದಲ್ಲೇ ಪೂರ್ಣ ಪ್ರಮಾಣದ ಕೋವಿಡ್ ಆಸ್ಪತ್ರೆಯಾಗಿ ರೂಪುಗೊಳ್ಳಲಿದೆ ಎಂದು ತಿಳಿಸಿದರು.

ಆಸ್ಪತ್ರೆ ಮುಂದಿನ ವಾರದಲ್ಲಿ ರೋಗಿಗಳ ಸೇವೆಗೆ ಲಭ್ಯವಾಗುವ ಸಾಧ್ಯತೆ ಇದೆ.

 

 

 

ಶ್ರೀಮತಿ ಸುಧಾಮೂರ್ತಿ ಅವರ ಇನ್ಫೋಸಿಸ್ ಫೌಂಡೇಷನ್ ನಿಂದ 30 ಕೋಟಿ ಅನುದಾನ ದೊರಕಿದ್ದು ಆ ಹಣದಲ್ಲಿ ಸುಸಜ್ಜಿತ ಕೊರೊನಾ ಆಸ್ಪತ್ರೆ ನಿರ್ಮಾಣವಾಗಿದೆ .

ಈ ಆಸ್ಪತ್ರೆ ಯಲ್ಲಿ ಹೈ ಫ್ಲೋ ಆಕ್ಸಿಜೆನ್ ಹೊಂದಿರುವ 180 ಹಾಸಿಗೆಗಳ ಸೌಕರ್ಯ, ಅಗತ್ಯವಿದ್ದಲ್ಲಿ 30 ವೆಂಟಿಲೇಟರ್ ಬೆಡ್ ಅಳವಡಿಸುವ ವ್ಯವಸ್ಥೆಗಳು ಇರುತ್ತದೆ. 

ಇನ್ನೂ ಹೆಚ್ಚು ಕನ್ನಡ ನ್ಯೂಸ್ ಓದಲು ನೋಡುಮಗ.ಕಂ INSTAGRAM ಪೇಜ್ Follow ಮಾಡಿ -->>

ಇನ್ಫೋಸಿಸ್ ಫೌಂಡೇಶನ್‌ನ ಅಧ್ಯಕ್ಷೆ ಸುಧಾ ಮೂರ್ತಿ ಅವರು ಕರ್ನಾಟಕ ಸರ್ಕಾರವನ್ನು ಉದ್ದೇಶಿಸಿ ಬರೆದಿರುವ ಪತ್ರದಲ್ಲಿ ವೈರಸ್ ಹರಡುವುದನ್ನು ತಡೆಗಟ್ಟಲು ತೆಗೆದುಕೊಳ್ಳಬಹುದಾದ ತಡೆಗಟ್ಟುವ ಕ್ರಮಗಳ ಬಗ್ಗೆ ವಿವರಿಸಿದ್ದಾರೆ. ರಾಜ್ಯ ಸರ್ಕಾರ ರಚಿಸಿದ ಕರ್ನಾಟಕ ಪ್ರವಾಸೋದ್ಯಮ ಕಾರ್ಯಪಡೆಯ ನೇತೃತ್ವ ವಹಿಸಿರುವ ಸುಧಾ ಮೂರ್ತಿ ಅವರು, ಹವಾನಿಯಂತ್ರಿತ ಪ್ರದೇಶಗಳಲ್ಲಿ ಕರೋನವೈರಸ್ ಹೆಚ್ಚಾಗುವುದರಿಂದ ಮಾಲ್‌ಗಳು ಮತ್ತು ಚಿತ್ರಮಂದಿರಗಳನ್ನು ಮುಚ್ಚುವಂತೆ ಕರೆ ನೀಡಿದ್ದರು ಎಂದು ಮಾಧ್ಯಮ ವರದಿಗಳು ತಿಳಿಸಿವೆ. ವರದಿಯ ಪ್ರಕಾರ “ಸಾಂಕ್ರಾಮಿಕ ರೋಗಗಳು” ಬಂದರೆ ಖಾಸಗಿ ಆಸ್ಪತ್ರೆಗಳು ರೋಗಿಗಳನ್ನು ನಿರ್ವಹಿಸಲು ಸಾಧ್ಯವಾಗುವುದಿಲ್ಲವಾದ್ದರಿಂದ 500-700 ಹಾಸಿಗೆಗಳನ್ನು ಹೊಂದಿರುವ ಸರ್ಕಾರಿ ಆಸ್ಪತ್ರೆಗೆ ಆಮ್ಲಜನಕ ರೇಖೆಗಳು ಮತ್ತು ಕೊಳವೆಗಳನ್ನು ಸಿದ್ಧಪಡಿಸಬೇಕು ಎಂದು ಅವರು ಒತ್ತಾಯಿಸಿದರು.

ನೋಡುಮಗ.ಕಂ ವಿಡಿಯೋ ನ್ಯೂಸ್ ಗಳನ್ನು ನೋಡಲು ನಮ್ಮ   YOUTUBE  ಚಾನೆಲ್  SUBSCRIBE  ಮಾಡಿ — >>

(Visited 664 times, 1 visits today)

You Might Be Interested In