ಈ ವಾರ ತೆರೆಯ ಮೇಲೆ ತನಿಖೆ

20 ವರ್ಷಗಳ ಹಿಂದೆ ತೆರೆ ಕಂಡಿದ್ದ ತನಿಖೆ ಶೀರ್ಷಿಕೆಯಡಿ ನಿರ್ಮಾಣವಾಗಿರುವ ಮತ್ತೊಂದು ಚಿತ್ರ ಈ ವಾರ 50ಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ.

thanike kannada movie

ಕನಕಪುರದಲ್ಲಿ ಕೆಲ ವರ್ಷಗಳ ಹಿಂದೆ ನಡೆದ ಸತ್ಯ ಘಟನೆಯನ್ನು ಇಟ್ಟುಕೊಂಡು ಚಿತ್ರ ನಿರ್ಮಿಸಲಾಗಿದೆ. ಕಲಿಗೌಡರು ಹಳ್ಳಿಯ ಆರು ಜನ ಸ್ನೇಹಿತರು ಹಾಗೂ ಒಬ್ಬ ಯುವತಿಯ ನಡುವೆ ನಡೆಯುವ ಕಥೆ ಇದಾಗಿದೆ.

ಜಿ.ಎಸ್. ಕಲಿಗೌಡ ಅವರು ಈ ಚಿತ್ರದ ನಿರ್ದೇಶನ, ನಿರ್ಮಾಣದ ಜೊತೆಗೆ ಸಾಹಿತ್ಯ ಕೂಡ ರಚಿಸಿದ್ದಾರೆ.
ಪ್ರೀತಿಯ ವಿಚಾರಕ್ಕೆ ಸ್ನೇಹಿತರಲ್ಲೇ ಮನಸ್ತಾಪ ಉಂಟಾಗುತ್ತದೆ. ಅದೇ ಸಮಯಕ್ಕೆ ಆ ಸ್ನೇಹಿತರಲ್ಲಿ ಒಬ್ಬನ ಕೊಲೆ ನಡೆದುಹೋಗುತ್ತದೆ. ಇದರಿಂದ ಉಳಿದ ಐವರು ಸ್ನೇಹಿತರು ಊರನ್ನೇ ಬಿಡುವಂತಾಗುತ್ತದೆ.

thanike kannada new movie

ಆರಂಭದಿಂದಲೂ ಪ್ರೇಕ್ಷಕರ ಮನದಲ್ಲಿ ಮೂಡುವ ಎಲ್ಲಾ ಪ್ರಶ್ನೆಗಳಿಗೆ ಚಿತ್ರದ ಕ್ಲೈಮಾಕ್ಸ್‌ನಲ್ಲಿ ಉತ್ತರ ಸಿಗುತ್ತದೆ.
ಮೈಸೂರು, ಪಾಂಡವಪುರ, ಕನಕಪುರ, ರಾಮನಗರ ಮತ್ತು ಚನ್ನಪಟ್ಟಣ ಸುತ್ತಮುತ್ತ ಈ ಚಿತ್ರದ ಚಿತ್ರೀಕರಣ ನಡೆಸಲಾಗಿದೆ. ಚಿತ್ರದ ನಾಯಕಿ ಚಂದನ ಅವರದು ಒಬ್ಬ ಹೈಸ್ಕೂಲ್ ಹುಡುಗಿಯ ಪಾತ್ರ. ಸಂತೋಷ್ ವಿಜಯಕುಮಾರ್, ಮಚ್ ಮುನಿರಾಜು, ಗುಲ್‌ಷನ್, ನಿಖಿತ್, ರವಿ, ಕಲ್ಕೆರೆ ಗಂಗಾಧರ್, ಗೋಪಿ ಪ್ರಮುಖ ಪಾತ್ರಗಳಲ್ಲಿದ್ದಾರೆ.

ಈ ಚಿತ್ರದಲ್ಲಿ ನವೀನ್ ಸಜ್ಜು ಹಾಡಿರುವ ಎಣ್ಣಿ ಹೊಡಿಯೋದ, ಹೆಂಡ್ತಿ ಬಿಡೋದ ಎಂಬ ಮಾಸ್ ಹಾಡು ಲಾಕ್ ಡೌನ್ ಸಮಯದಲ್ಲಿ ಬಿಡುಗಡೆಯಾಗಿ ದೊಡ್ಡ ಮಟ್ಟದಲ್ಲಿ ಹಿಟ್ ಆಗಿದೆ. ಆರ್.ಡಿ. ಅನಿಲ್ ಈ ಚಿತ್ರದ ಮೂಲಕ ನಾಯಕನಾಗಿ ಚಿತ್ರರಂಗಕ್ಕೆ ಹೊಸ ಎಂಟ್ರಿ ಕೊಟ್ಟಿದ್ದಾರೆ. ಅವರು ಚಿತ್ರದ ನಿರ್ಮಾಪಕರೂ ಹೌದು.

(Visited 58 times, 1 visits today)

You Might Be Interested In

LEAVE YOUR COMMENT

Your email address will not be published. Required fields are marked *