ಕಾಶ್ಮೀರದ ಗ್ರಾಮದಲ್ಲಿ ಶಾಲೆ ನಿರ್ಮಾಣಕ್ಕೆ 1ಕೋಟಿ ರೂ. ದೇಣಿಗೆ ಕೊಟ್ಟ ನಟ ಅಕ್ಷಯ್ ಕುಮಾರ್

ಬಾಲಿವುಡ್ ನಟ ಅಕ್ಷಯ್ ಕುಮಾರ್ ಜಮ್ಮು ಕಾಶ್ಮೀರದಲ್ಲಿ ಸೈನಿಕರ ಜೊತೆಗೆ ಹಾಡಿ ಕುಣಿದು, ಅಲ್ಲಿನ ಗ್ರಾಮ ಒಂದರಲ್ಲಿ ಶಾಲೆ ನಿರ್ಮಾಣಕ್ಕೆ ಒಂದು ಕೋಟಿ ರೂ. ದೇಣಿಗೆಯನ್ನು ನೀಡಿದ್ದಾರೆ.

akshay kumar with soldiers

ಇತ್ತೀಚೆಗೆ ಅಕ್ಷಯ್ ಕುಮಾರ್ ಜಮ್ಮು ಕಾಶ್ಮೀರಕ್ಕೆ ಭೇಟಿ ನೀಡಿದ್ದರು. BSF ಸೈನಿಕರ ಜೊತೆ ಸಂವಾದ ನೆಡೆಸಿ ಅಲ್ಲಿನ ಜನರೊಂದಿಗೆ ಕೆಲ ಕಾಲ ಬೆರೆತರು. ನಂತರ ಅವರ ಜೊತೆ ಹಾಡಿ, ಕುಣಿದರು. ಬಿಎಸ್‍ಎಫ್ ಸೈನಿಕರು ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಅವರು ಪಾಲ್ಗೊಂಡರು. ನಟನನ್ನು ನೋಡಲು ಸುತ್ತಮುತ್ತಲಿನ ಹಳ್ಳಿಯ ಜನರು ಮುಗಿಬಿದ್ದಿದ್ದರು. ಇದೆ ವೇಳೆ ಅಲ್ಲಿನ ನೀರೂ ಗ್ರಾಮಕ್ಕೆ ಶಾಲೆ ನಿರ್ಮಾಣಕ್ಕಾಗಿ 1 ಕೋಟಿ ರೂ. ನೀಡುವ ಮೂಲಕ ಅಕ್ಷಯ್ ಕುಮಾರ್ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. .

akshay kumar dancing with soldiers

ಅಕ್ಷಯ್ ಕುಮಾರ್ ರವರು ಸಮಾಜಮುಖಿ ಕಾರ್ಯಗಳಲ್ಲಿ ಸದಾ ಮುಂದಿರುತ್ತಾರೆ. ಕಳೆದ ಲಾಕ್‍ಡೌನ್ ಸಮಯದಲ್ಲಿ 25 ಕೋಟಿ ರೂ.ಗಳನ್ನು ದೇಣಿಗೆಯಾಗಿ ನೀಡಿ ಎಲ್ಲರಿಗೂ ಮಾದರಿ ಆಗಿದ್ದರು. ಈಗ ಶಾಲೆ ನಿರ್ಮಾಣಕ್ಕಾಗಿ ಒಂದು ಕೋಟಿ ರೂ. ದೇಣಿಗೆ ನೀಡಿ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.

(Visited 580 times, 1 visits today)

You Might Be Interested In

LEAVE YOUR COMMENT

Your email address will not be published. Required fields are marked *