ಪುನೀತ್ ಗೆ ಪದ್ಮಶ್ರೀ, ಕುಟುಂಬ ವರ್ಗದವರೊಂದಿಗೆ ಚರ್ಚಿಸಿ ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು: ಬಸವರಾಜ ಬೊಮ್ಮಾಯಿ

ಪುನೀತ್ ರಾಜ್‍ಕುಮಾರ್ ಅವರಿಗೆ ಪ್ರತಿಷ್ಠಿತ ಪದ್ಮಶ್ರೀ ಪ್ರಶಸ್ತಿ ನೀಡುವ ಕುರಿತು ಕೇಳಿದ ಪ್ರಶ್ನೆಗೆ ಮುಖ್ಯಮಂತ್ರಿ ಬೊಮ್ಮಾಯಿ ಉತ್ತರಿಸಿದರು. ಪುನೀತ್ ಅವರ ಕುಟುಂಬ ವರ್ಗದವರೊಂದಿಗೆ ಚರ್ಚಿಸಿ ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೇಳಿದರು.

ಮುಖ್ಯಮಂತ್ರಿ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಬೊಮ್ಮಾಯಿರವರು, ಪದ್ಮಶ್ರೀ ಪ್ರಶಸ್ತಿಯನ್ನು ನೀಡಬೇಕಾದರೆ ಕೆಲವು ರೀತಿನೀತಿಗಳಿವೆ. ಅವುಗಳೆಲ್ಲವನ್ನು ಪಾಲಿಸಿ ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಬೇಕಾಗುತ್ತದೆ ಎಂದು ತಿಳಿಸಿದರು.

ಅಪ್ಪುರವರ ಕುಟುಂಬದೊಂದಿಗೆ ಸದ್ಯದಲ್ಲೇ ಚರ್ಚೆ ಮಾಡುತ್ತೇವೆ. ಪದ್ಮಶ್ರೀ ಪ್ರಶಸ್ತಿ ನೀಡಬೇಕು ಎಂಬುದು ಬಹುತೇಕರ ಒತ್ತಾಸೆಯಾಗಿದೆ ಸೂಕ್ತ ಸಂದರ್ಭದಲ್ಲಿ ಚರ್ಚೆ ಮಾಡಿ ಕೇಂದ್ರಕ್ಕೆ ಶಿಫಾರಸ್ಸು ಮಾಡಲಾಗುವುದು ಎಂದು ಹೇಳಿದರು.

ಇಂದು ಪುನೀತ್ ರಾಜ್‍ಕುಮಾರ್ ಅವರ 11ನೇ ದಿನದ ಪುಣ್ಯಸ್ಮರಣೆ ಕಾರ್ಯಕ್ರಮ ನಡೆಯುತ್ತಿದೆ. ನನ್ನನ್ನು ಈ ಕಾರ್ಯಕ್ರಮಕ್ಕೆ ಆಗಮಿಸಬೇಕೆಂದು ಅವರ ಕುಟುಂಬದವರು ಮನವಿ ಮಾಡಿದ್ದಾರೆ. ವಿಧಿವಿಧಾನ ಕಾರ್ಯಕ್ರಮಗಳನ್ನು ಅತ್ಯಂತ ಯಶಸ್ವಿಯಾಗಿ ನಿಭಾಯಿಸಿದ್ದಕ್ಕಾಗಿ ಅವರು ಸರ್ಕಾರಕ್ಕೆ ಕೃತಜ್ಞತೆ ಸಲ್ಲಿಸಿದ್ದಾರೆ.
ನೀವು ಭಾಗಿಯಾಗಬೇಕೆಂದು ಅವರು ಮನವಿ ಮಾಡಿಕೊಂಡಿದ್ದಾರೆ. ಹಾಗಾಗಿ ನಾನು ಸಚಿವ ಸಂಪುಟ ಸಭೆ ಮುಗಿದ ಬಳಿಕ ಭಾಗಿಯಾಗುತ್ತೇನೆ ಎಂದು ಬೊಮ್ಮಾಯಿ ಹೇಳಿದರು.

(Visited 157 times, 1 visits today)

You Might Be Interested In

LEAVE YOUR COMMENT

Your email address will not be published. Required fields are marked *