ಮಳೆ : ಇನ್ನೂ 2 ದಿನಗಳು ಹೀಗೆ ಮಳೆ ಮುಂದುವರಿಯಲಿದೆ

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ರಾಜ್ಯದಲ್ಲಿ ಮಳೆ ಮುಂದಿನ ೨ ದಿನಗಳು ಮತ್ತಷ್ಟು ಚುರುಕಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ದಾವಣಗೆರೆ ಮತ್ತು ಬಳ್ಳಾರಿಯಲ್ಲಿ ಇಂದು ಭಾರಿ ಮಳೆಯಾಗಲಿದೆ. ಈ ಹಿನ್ನೆಲೆ, ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

ಮಲೆನಾಡು ಜಿಲ್ಲೆಗಳಲ್ಲಿ ಮುಂದಿನ 48 ಗಂಟೆ ಹಾಗೂ ಮೈಸೂರು, ಮಂಡ್ಯ, ರಾಮನಗರ ಮತ್ತು ಚಾಮರಾಜನಗರದಲ್ಲಿ ಮುಂದಿನ 24 ಗಂಟೆ ಯೆಲ್ಲೋ ಅಲರ್ಟ್ ಇರಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

(Visited 527 times, 1 visits today)

You Might Be Interested In

LEAVE YOUR COMMENT

Your email address will not be published. Required fields are marked *